TSK

TSK · ಆಮೋಸ 4:13

مراجع Treasury of Scripture Knowledge في ಕನ್ನಡ IRV.

العودة إلى المقطع

ಮೋಶೆ ಆಕಾಶಕ್ಕೆ ಕೈಯನ್ನು ಚಾಚಿದಾಗ ಐಗುಪ್ತ ದೇಶದಲ್ಲೆಲ್ಲಾ ಮೂರು ದಿನ ಕಾರ್ಗತ್ತಲೆ ಮುಚ್ಚಿಕೊಂಡಿತು.

ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.

ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.

ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.

ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.

ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.

ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.

ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.

ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು.

ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ಹೆಸರು.

ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.

ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!

ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”

ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು, ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ. ಸಮುದ್ರದ ನೀರನ್ನು ಸೇದಿ, ಭೂಮಂಡಲದ ಮೇಲೆ ಹೊಯ್ಯುತ್ತಾನೆ, ಯೆಹೋವನೆಂಬುವುದೇ ಆತನ ನಾಮಧೇಯ.

ನನ್ನ ಕರ್ತನಾದ ಯೆಹೋವನೇ ನನ್ನ ಬಲ; ಆತನು ನನ್ನ ಕಾಲನ್ನು ಜಿಂಕೆಯಂತೆ ಚುರುಕುಗೊಳಿಸುತ್ತಾನೆ, ನಾನು ಬೆಟ್ಟ ಗುಡ್ಡಗಳಲ್ಲಿ ಓಡಾಡುವಂತೆ ಮಾಡುತ್ತಾನೆ. ಪ್ರಧಾನ ಗಾಯಕನ ಕೀರ್ತನಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.

ಯೇಸು ಅವರ ಆಲೋಚನೆಗಳನ್ನು ತಿಳಿದು, ‹“ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?›

ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.