¶ ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.
TSK
TSK · ಆಮೋಸ 5:1
مراجع Treasury of Scripture Knowledge في ಕನ್ನಡ IRV.
“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
ಸ್ತ್ರೀಯರೇ, ಯೆಹೋವನ ನುಡಿಯನ್ನು ಕೇಳಿ ಆತನ ಬಾಯಿಂದ ಹೊರಟ ಮಾತಿಗೆ ಕಿವಿದೆರೆಯಿರಿ. ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಡುವುದನ್ನು ಕಲಿಸಿರಿ, ಪ್ರತಿಯೊಬ್ಬಳು ತನ್ನ ನೆರೆಯವಳಿಗೂ ಶೋಕಗೀತವನ್ನು ಅಭ್ಯಾಸ ಮಾಡಿಸಲಿ;
¶ “ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,
ಇವರು ನಿನ್ನ ವಿಷಯದಲ್ಲಿ ಗೋಳಾಟವನ್ನೆತಿ, ನಾವಿಕರ ನಿವಾಸವೇ, ಹೆಸರುವಾಸಿಯ ಪುರಿಯೇ, ಸಮುದ್ರದಿಂದ ಬಲಗೊಂಡ ನಗರಿಯೇ, ನೀನು ಎಷ್ಟೋ ಹಾಳಾದಿ! ಸಮುದ್ರದ ಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ಎಷ್ಟೋ ಹಾಳಾದವು!
ನಿನ್ನ ಆಸ್ತಿಯು, ನಿನ್ನ ವಸ್ತುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಒಡಕುಗಳನ್ನು ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ನಿನ್ನಲ್ಲಿನ ಸಮಸ್ತ ಸೈನಿಕರು, ಅಂತು ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ಮುಳುಗಿ ಹೋಗುವರು.
“ನರಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ವಿಷಯವಾಗಿ ಶೋಕ ಗೀತೆಯನ್ನು ಹಾಡಿ ಅವನಿಗೆ ಹೀಗೆ ನುಡಿ, ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು, ನೀರನ್ನು ನಿನ್ನ ಕಾಲುಗಳಿಂದ ಕಲಕಿ, ಜನಾಂಗಗಳ ಹೊಳೆಗಳನ್ನೂ ತುಳಿದು ಬದಿಮಾಡಿದೆ.’”
¶ ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,
ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.
ಆ ದಿನದಲ್ಲಿ ಜನರು ನಿಮ್ಮ ವಿಷಯವಾಗಿ ಅಪಹಾಸ್ಯ ಮಾಡಿ ಲಾವಣಿಕಟ್ಟಿ ಹಾಡುವರು. ‘ಅಯ್ಯೋ, ನಾವು ತೀರಾ ಸೂರೆಹೋದೆವಲ್ಲಾ ಯೆಹೋವನು ನಮ್ಮವರ ಸ್ವತ್ತನ್ನು ಪರಾಧೀನಮಾಡುತ್ತಿದ್ದಾನೆ. ಅಯ್ಯೋ, ಅದನ್ನು ನಮ್ಮಿಂದ ತೊಲಗಿಸಿದ್ದಾನಲ್ಲಾ, ನಮ್ಮ ಭೂಮಿಯನ್ನು ದೇವದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ’” ಎಂದು ಶೋಕಗೀತವಾಗಿ ಹಾಡುವರು.