TSK

TSK · ಆಮೋಸ 6:5

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.

ದ್ವಾರಪಾಲಕರನ್ನಾಗಿ, ನಾಲ್ಕು ಸಾವಿರ ಜನರನ್ನು ಮತ್ತು ತಾನು ಸಿದ್ಧಪಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನೂ ನೇಮಿಸಿದನು.

ತಮ್ಮ ಮಕ್ಕಳನ್ನು ಮಂದೆಮಂದೆಯಾಗಿ ನಡೆಸುವರು, ಅವರ ಮಕ್ಕಳು ಕುಣಿದಾಡುವರು.

ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ.

ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾಗುವವು” ಕರ್ತನಾದ ಯೆಹೋವನು ಹೀಗೆ ನುಡಿಯುತ್ತಾನೆ, “ಆಗ ಹೆಣಗಳು ಹೆಚ್ಚುವವು, ಅವುಗಳನ್ನು ಎಲ್ಲಾ ಸ್ಥಳಗಳಲ್ಲಿ ಸದ್ದುಗದ್ದಲವಿಲ್ಲದೆ ಬಿಸಾಡಿಬಿಡುವರು!”

ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.