ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.
TSK
TSK · ಆಮೋಸ 7:12
مراجع Treasury of Scripture Knowledge في ಕನ್ನಡ IRV.
ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.
ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.
“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.
ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
¶ ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.