TSK

TSK · ಆಮೋಸ 7:14

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.

¶ ಬೇತೇಲಿನ ಪ್ರವಾದಿ ಮಂಡಳಿಯವರು ಎಲೀಷನನ್ನು ಎದುರುಗೊಂಡು ಅವನನ್ನು, “ಯೆಹೋವನು ಈ ಹೊತ್ತು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂಬುದು ನಿನಗೆ ಗೊತ್ತುಂಟೋ?” ಎಂದು ಕೇಳಿದರು. ಅದಕ್ಕೆ ಅವನು, “ಗೊತ್ತಿದೆ ನೀವು ಸುಮ್ಮನಿರಿ” ಎಂದನು.

¶ ಪ್ರವಾದಿ ಮಂಡಳಿಯವರಲ್ಲಿ ಐವತ್ತು ಜನರು ಇವರ ಹಿಂದಿನಿಂದಲೇ ಬಂದು ಯೊರ್ದನಿಗೆ ಸ್ವಲ್ಪ ದೂರದಲ್ಲಿಯೇ ನಿಂತುಕೊಂಡರು.

¶ ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.

ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.

ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.

¶ ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.

ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.’ ಎಂದು ಹೇಳಲು,