ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
TSK
TSK · ಆಮೋಸ 7:4
مراجع Treasury of Scripture Knowledge في ಕನ್ನಡ IRV.
ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.
ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.
ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.
ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
¶ ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.
¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
¶ ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, ‹“ಇಲ್ಲಿಗೆ ಏರಿ ಬಾ,›‹ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು”› ಎಂದು ಹೇಳಿತು.