TSK

TSK · ಕೊಲೊಸ್ಸೆಯವರಿಗೆ 1:13

مراجع Treasury of Scripture Knowledge في ಕನ್ನಡ IRV.

العودة إلى المقطع

“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.

ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.

‹ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.›

‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›

‹ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ”› ಎಂದು ಹೇಳಿದನು.

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›

‹ತಂದೆಯೇ, ನೀನು ನನಗೆ ಕೊಟ್ಟವರು, ನಾನಿರುವ ಸ್ಥಳದಲ್ಲಿ ನನ್ನೊಂದಿಗೆ ಇದ್ದುಕೊಂಡು,›‹ಜಗದುತ್ಪತ್ತಿಗೂ ಮೊದಲೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ನೋಡಬೇಕೆಂದು, ನಾನು ಆಶಿಸುತ್ತೇನೆ.›

ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.

ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.

ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.

ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.

ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.

ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.