ನಮ್ಮನ್ನು ಅನೇಕ ಕಷ್ಟನಷ್ಟಗಳಿಗೆ ಗುರಿಮಾಡಿದ ನೀನೇ ಪುನಃ ಉಜ್ಜೀವಿಸಮಾಡು; ನಮ್ಮನ್ನು ಭೂಮಿಯ ಅಧೋಭಾಗದಿಂದ ಮೇಲೆತ್ತು.
TSK
TSK · ಕೊಲೊಸ್ಸೆಯವರಿಗೆ 2:13
مراجع Treasury of Scripture Knowledge في ಕನ್ನಡ IRV.
¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.
ಆದರೆ ಯೇಸು ಅವನಿಗೆ, ‹“ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು”› ಎಂದು ಹೇಳಿದನು.
‹ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.›
‹ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.›
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.
“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. ಕಡೆ ಆದಾಮನಾದರೋ ಜೀವ ಕೊಡುವ ಆತ್ಮನಾದನು.
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
¶ ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.
¶ ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
ಆದರೆ ಸುಖಭೋಗದಲ್ಲಿರುವ ವಿಧವೆಯು ಬದುಕಿದ್ದರೂ ಸತ್ತಂತೆಯೇ.
¶ ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?
ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.