TSK

TSK · ಕೊಲೊಸ್ಸೆಯವರಿಗೆ 2:16

مراجع Treasury of Scripture Knowledge في ಕನ್ನಡ IRV.

العودة إلى المقطع

“ನೀವು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ಭೂಮಿಯ ಮೇಲಿರುವ ಪ್ರಾಣಿಗಳಲ್ಲಿ ಇವುಗಳ ಮಾಂಸವನ್ನು ನೀವು ತಿನ್ನಬಹುದು,

¶ “‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.

ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”

ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.

¶ ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.

ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.

ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.

ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

¶ ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗವು ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ” ಎಂದು ಅರಿಕೆಮಾಡಲು,

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

‹ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು”› ಎಂದು ಹೇಳಿದನು.

‹ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?”› ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.

ಆದರೆ ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ, ಹಾದರವನ್ನೂ, ಕುತ್ತಿಗೆ ಹಿಸುಕಿ ಕೊಂದದ್ದನ್ನೂ, ರಕ್ತವನ್ನೂ ವಿರ್ಜಿಸಬೇಕೆಂದು ನಾವು ಅವರಿಗೆ ಪತ್ರವನ್ನು ಬರೆಯೋಣ ಎಂದು ತೀರ್ಮಾನಿಸಿದರು.

ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.

ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.

ಆದಾಗ್ಯೂ, ಈ ತಿಳಿವಳಿಕೆಯು ಎಲ್ಲರಲ್ಲಿಯೂ ಇಲ್ಲ. ಪ್ರತಿಯಾಗಿ, ಕೆಲವರು ಈ ವರೆಗೂ ವಿಗ್ರಹಗಳ ಬಳಿಗೆ ಹೋಗುವ ರೂಢಿಯಲ್ಲಿದರಿಂದ ತಾವು ತಿನ್ನುವ ಈ ಆಹಾರವು ವಿಗ್ರಹಕ್ಕೆ ಅರ್ಪಿಸಿದ್ದೆಂದು ತಿನ್ನುತ್ತಾರೆ; ಅವರ ಮನಸ್ಸಾಕ್ಷಿಯು ಬಲಹೀನವಾದ್ದದರಿಂದ ಕಲುಷಿತವಾಗಿ ಹೋಗಿದೆ.

ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.

ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.