TSK

TSK · ಕೊಲೊಸ್ಸೆಯವರಿಗೆ 3:22

مراجع Treasury of Scripture Knowledge في ಕನ್ನಡ IRV.

العودة إلى المقطع

ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.

¶ ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.

ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.

ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು.

¶ ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.

¶ ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.

ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,

¶ ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.