TSK

TSK · ಕೊಲೊಸ್ಸೆಯವರಿಗೆ 4:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ ಮನೆವಾರ್ತೆಯವರೆಂತಲೂ ಪರಿಗಣಿಸಲಿ.

¶ ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.

ಕ್ರಿಸ್ತಯೇಸುವಿನ ದಾಸನಾಗಿರುವ ನಿಮ್ಮ ಊರಿನವನಾದ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ, ನೀವು ಪ್ರವೀಣರಾಗಿಯೂ ದೇವರ ಎಲ್ಲಾ ಚಿತ್ತದಲ್ಲಿ ಪೂರ್ಣ ನಿಶ್ಚಯವುಳ್ಳವರಾಗಿರಬೇಕೆಂದು ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಯಲ್ಲಿ ಹೋರಾಡುತ್ತಾನೆ.

¶ ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.