TSK

TSK · ಕೊಲೊಸ್ಸೆಯವರಿಗೆ 4:8

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,

ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.

ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಬೇಡಿಕೊಂಡು ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ?

ಆದ್ದರಿಂದ ನೀವು ಅವನನ್ನು ನೋಡಿ ತಿರುಗಿ ಸಂತೋಷಪಡಬೇಕೆಂತಲೂ ನನ್ನ ದುಃಖ ಕಡಿಮೆಯಾಗಬೇಕೆಂತಲೂ ನಾನು ಅವನನ್ನು ಅತಿ ತವಕದಿಂದ ಕಳುಹಿಸಿದ್ದೇನೆ.

ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,

ಆದ್ದರಿಂದ ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯನ್ನು ಕುರಿತು ನಾನು ತಿಳಿದುಕೊಳ್ಳುವುದಕ್ಕಾಗಿ ಅವನನ್ನು ನಿಮ್ಮ ಬಳಿಗೆ ಕಳುಹಿಸಿದೆನು.

ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.