TSK

TSK · ದಾನಿಯೇಲನು 1:3

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮಗೆ ಗಂಡು ಮತ್ತು ಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವುದರಿಂದ ನಿಮ್ಮ ಬಳಿಯಲ್ಲಿ ಇರುವುದಿಲ್ಲ.

ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು.

ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ.

¶ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.