TSK

TSK · ದಾನಿಯೇಲನು 1:7

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಫರೋಹನು ಯೋಸೇಫನಿಗೆ “ಸಾಫ್ನತ್ಪನ್ನೇಹ” ಎಂದು ಹೆಸರಿಟ್ಟನು. ತರುವಾಯ ಓನನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ಯೋಸೇಫನು ಐಗುಪ್ತದೇಶದ ಮೇಲೆ ಅಧಿಕಾರಿಯಾಗಿ ದೇಶದಲ್ಲೆಲ್ಲಾ ಸಂಚರಿಸಿದನು.

ಬಾಬೆಲಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಚಿದ್ಕೀಯನೆಂದು ಹೆಸರಿಟ್ಟನು.

ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ತೆಗೆಯಿಸಲು ನೀವು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು.

ದಾನಿಯೇಲನು ಬಿನ್ನಹ ಮಾಡಲು ರಾಜನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರಿಗೆ ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿದನು. ದಾನಿಯೇಲನು ಅರಮನೆಯಲ್ಲಿ ಉಳಿದನು.

ಹೀಗಿರಲು ನನ್ನನ್ನು ಹೆದರಿಸುವ ಒಂದು ಕನಸನ್ನು ಕಂಡೆನು; ಹಾಸಿಗೆಯಲ್ಲಿ ನನಗುಂಟಾದ ಯೋಚನೆಗಳೂ, ನನ್ನ ಮನಸ್ಸಿಗೆ ಬಿದ್ದ ಸ್ವಪ್ನಗಳೂ ನನ್ನನ್ನು ಕಳವಳಗೊಳಿಸಿದವು.

ಹೌದು, ಬೇಲ್ತೆಶಚ್ಚರನೆಂಬ ಅಡ್ಡ ಹೆಸರನ್ನು ರಾಜನಿಂದ ಹೊಂದಿದ ಈ ದಾನಿಯೇಲನಲ್ಲಿ ಪರಮಬುದ್ಧಿಯೂ, ಜ್ಞಾನವೂ, ವಿವೇಕವೂ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನವೂ, ಒಗಟುಬಿಡಿಸುವ ಚಮತ್ಕಾರವೂ, ಕಠಿಣವಾದ ಸಂಗತಿಗಳನ್ನು ತಿಳಿಸುವ ಚಾತುರ್ಯವೂ ತೋರಿಬಂದವು. ಆದುದರಿಂದಲೇ ಆತನನ್ನು ಹಾಗೆ ನೇಮಿಸಿದನು. ಈಗ ಆ ದಾನಿಯೇಲನನ್ನು ಕರೆಯಿಸಿದರೆ ಅವನು ಬರಹದ ಅರ್ಥವನ್ನು ವಿವರಿಸುವನು” ಎಂದಳು.