TSK

TSK · ದಾನಿಯೇಲನು 11:29

مراجع Treasury of Scripture Knowledge في ಕನ್ನಡ IRV.

العودة إلى المقطع

ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.

¶ ಪಾರಸಿಯ ರಾಜನಾದ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು; ಅದು ಮಹಾಹೊರಾಟದ ಸಂಗತಿ ಸತ್ಯವಾದ ಸಂಗತಿ; ಅವನು ಕಂಡ ಕನಸನ್ನು ಗಮನಿಸಿ ಆ ಸಂಗತಿಯನ್ನು ಮನದಟ್ಟು ಮಾಡಿಕೊಂಡನು.

ಅವನು ದೊಡ್ಡ ದಂಡೆತ್ತಿ ದಕ್ಷಿಣ ದಿಕ್ಕಿನ ರಾಜನ ವಿರುದ್ಧವಾಗಿ ತನ್ನ ರಾಜ್ಯದ ಬಲವನ್ನೆಲ್ಲ ಕೂಡಿಸಿ ಧೈರ್ಯದಿಂದ ಹೊರಡುವನು. ದಕ್ಷಿಣ ದಿಕ್ಕಿನ ರಾಜನು ಅತ್ಯಧಿಕ ಬಲವುಳ್ಳ ಮಹಾ ಸೈನ್ಯಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ನಿಲ್ಲಲಾರನು, ಅವನು ಸೋಲುವ ಹಾಗೆ ಕುಯುಕ್ತಿಗಳನ್ನು ಕಲ್ಪಿಸುವನು.

ತಂದೆಯು ಗೊತ್ತುಮಾಡಿದ ಸಮಯದವರೆಗೂ ಪಾಲಕರ ಮತ್ತು ಕಾರ್ಯನಿರ್ವಾಹಕರ ಅಧೀನದಲ್ಲಿರುವನು.