TSK

TSK · ದಾನಿಯೇಲನು 11:37

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.

¶ “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”

ನಾನು ನನ್ನ ನಲ್ಲನ ನಲ್ಲೆ, ಅವನ ಆಶೆಯು ನನ್ನ ಮೇಲೆ.

ಉನ್ನತವಾದ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುವೆನು’ ಎಂದುಕೊಂಡೆಯಲ್ಲಾ!

“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.

ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.