ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.
TSK
TSK · ದಾನಿಯೇಲನು 11:6
مراجع Treasury of Scripture Knowledge في ಕನ್ನಡ IRV.
“ನರಪುತ್ರನೇ, ನಾನು ಐಗುಪ್ತದ ಅರಸನಾದ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ, ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ, ಅದನ್ನು ಬಿಗಿಸಲಿಲ್ಲ.”
ಅನಂತರ ಅವಳು ಹುಟ್ಟಿದ ವಂಶವೃಕ್ಷದಲ್ಲಿ ಹುಟ್ಟಿದವರು ಅದರ ಸ್ಥಾನದಲ್ಲಿ ನಿಂತು ಉತ್ತರ ದಿಕ್ಕಿನ ರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು ಅವನ ದುರ್ಗದೊಳಗೆ ನುಗ್ಗಿ, ಅವರೊಡನೆ ಯುದ್ಧಮಾಡಿ, ಅವರನ್ನು ಗೆಲ್ಲುವರು.
ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.
ಇಗೋ, ದೇಶದಲ್ಲಿ ನಾನು ಒಬ್ಬ ಕುರುಬನನ್ನು ನೇಮಿಸುವೆನು; ಅವನು ಹಾಳಾಗುತ್ತಿರುವ ಕುರಿಗಳನ್ನು ನೋಡಿಕೊಳ್ಳನು, ಚದುರಿದವುಗಳನ್ನು ಹುಡುಕನು, ಊನವಾದವುಗಳನ್ನು ಗುಣಪಡಿಸನು, ನೆಟ್ಟಗಿರುವವುಗಳನ್ನು ಸಾಕನು; ಕೊಬ್ಬಿದವುಗಳ ಮಾಂಸವನ್ನು ತಿನ್ನುವನು, ಕುರಿಗಳ ಗೊರಸುಗಳನ್ನು ಚೂರುಚೂರು ಮಾಡುವನು.