ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.
TSK
TSK · ದಾನಿಯೇಲನು 12:3
مراجع Treasury of Scripture Knowledge في ಕನ್ನಡ IRV.
ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.
¶ ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
ಜನರಲ್ಲಿನ ಜ್ಞಾನಿಗಳು ಅನೇಕರಿಗೆ ವಿವೇಕ ಹೇಳಲಾಗಿ, ಅವರು ಬಹಳ ದಿನ ಕತ್ತಿ, ಬೆಂಕಿ, ಸೆರೆಸೂರೆಗಳಿಗೆ ಸಿಕ್ಕಿ ಬೀಳುವರು.
‹ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ› ಅಂದನು.
‹ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?›
‹ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.›
¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
ಇದಲ್ಲದೆ ಸ್ವರ್ಗೀಯ ಶರೀರಗಳುಂಟು, ಭೂಲೋಕದ ಶರೀರಗಳುಂಟು, ಆದರೆ ಪರಲೋಕದ ಶರೀರಗಳ ಮಹಿಮೆ ಬೇರೆ, ಭೂಲೋಕದ ಶರೀರಗಳ ಮಹಿಮೆ ಬೇರೆ.
ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.