ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರ ಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ತಾಮ್ರದ ಯಜ್ಞವೇದಿಯ ಪಕ್ಕದಲ್ಲಿ ನಿಂತುಕೊಂಡರು.
TSK
TSK · ದಾನಿಯೇಲನು 12:6
مراجع Treasury of Scripture Knowledge في ಕನ್ನಡ IRV.
ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು” ಎಂದು ಮನುಷ್ಯ ಧ್ವನಿಯಂತಹ ಒಂದು ವಾಣಿಯು ಊಲಾ ಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.
¶ ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,
ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.