TSK

TSK · ದಾನಿಯೇಲನು 2:18

مراجع Treasury of Scripture Knowledge في ಕನ್ನಡ IRV.

العودة إلى المقطع

ಒಂದು ವೇಳೆ ಐವತ್ತು ಮಂದಿ ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ ಪಟ್ಟಣವನ್ನೆಲ್ಲಾ ನಾಶ ಮಾಡುವಿಯಾ?” ಎಂದು ಕೇಳಲು ಯೆಹೋವನು, “ಅಲ್ಲಿ ನಲ್ವತ್ತೈದು ಮಂದಿ ನೀತಿವಂತರು ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

¶ ಆಗ ಎಸ್ತೇರಳು ಮೊರ್ದೆಕೈಗೆ, “ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು;

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;

ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.

‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.

ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.

‹ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.›

ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.