TSK

TSK · ದಾನಿಯೇಲನು 2:27

مراجع Treasury of Scripture Knowledge في ಕನ್ನಡ IRV.

العودة إلى المقطع

ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.

ಆಗ ರಾಜನು ತನ್ನ ಕನಸುಗಳ ಅಭಿಪ್ರಾಯವನ್ನು ತಿಳಿದುಕೊಳ್ಳಲು ಜೋಯಿಸರನ್ನೂ, ಮಂತ್ರವಾದಿಗಳನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಿಸಲು ಅವರು ಸನ್ನಿಧಿಗೆ ಬಂದು ರಾಜನ ಮುಂದೆ ನಿಂತುಕೊಂಡರು.

¶ ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.