ಬೇಸಿಗೆ ಬರುತ್ತಲೇ ಮಾಯವಾಗುವವು, ಸೆಕೆಯುಂಟಾದಾಗ ಅವು ಬತ್ತಿ ಕಾಣಿಸದೆ ಹೋಗುವವು.
TSK
TSK · ದಾನಿಯೇಲನು 2:35
مراجع Treasury of Scripture Knowledge في ಕನ್ನಡ IRV.
ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.
ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
ಸರ್ವಭೂನಿವಾಸಿಗಳು ನಿನಗೆ ಅಡ್ಡಬಿದ್ದು ಭಜಿಸುತ್ತಾ, ನಿನ್ನ ನಾಮವನ್ನು ಕೀರ್ತಿಸುವರು” ಎಂದು ಹೇಳಿರಿ. ಸೆಲಾ
ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.
ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಹೌದು, ಮಹಾ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತಿವೆ. ಆದರೆ ಆತನು ಅವರನ್ನು ಗದರಿಸುವಾಗ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರ ಗಾಳಿಯಿಂದ ಸುತ್ತಾಡುವ ಧೂಳಿನಂತೆಯೂ ಅಟ್ಟಲ್ಪಡುವರು.
ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.
ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.
ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.
¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.