TSK

TSK · ದಾನಿಯೇಲನು 2:48

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ,

ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.

ಅವರು, “ಇಸ್ರಾಯೇಲ್ಯರಾದ ನಮ್ಮನ್ನು ಹೀಯಾಳಿಸುವುದಕ್ಕೋಸ್ಕರ ಬಂದಿರುವ ಈ ಮನುಷ್ಯನನ್ನು ಕಂಡಿರಾ? ಯಾವನು ಇವನನ್ನು ಕೊಲ್ಲುವನೋ ಅಂಥವನಿಗೆ ಅರಸನು ಅಪಾರದ್ರವ್ಯದೊಡನೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡುವನು. ಇದಲ್ಲದೆ ಅವನ ತಂದೆಯ ಕುಟುಂಬವನ್ನು ಎಲ್ಲಾ ತೆರಿಗೆಯಿಂದ ವಿಮೋಚಿಸುವನು” ಎಂದು ಮಾತನಾಡಿಕೊಳ್ಳುತ್ತಿದ್ದರು.

ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.

ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.

ನೀವು ಆ ಕನಸನ್ನೂ, ಅದರ ಅರ್ಥವನ್ನೂ ತಿಳಿಸಿದರೆ ನನ್ನಿಂದ ನಿಮಗೆ ದಾನ ಮತ್ತು ಬಹುಮಾನಗಳೂ, ವಿಶೇಷ ಸನ್ಮಾನಗಳೂ ಲಭಿಸುವವು. ಆದಕಾರಣ ಆ ಕನಸನ್ನೂ, ಅದರ ಅಭಿಪ್ರಾಯವನ್ನೂ ನನಗೆ ತಿಳಿಸಿರಿ” ಎಂದು ಹೇಳಿದನು.

ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.

ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.

¶ ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.

¶ ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.