ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.
TSK
TSK · ದಾನಿಯೇಲನು 3:15
مراجع Treasury of Scripture Knowledge في ಕನ್ನಡ IRV.
ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
‘ಅರಸನೇ, ನಾವು ಆರಾಧಿಸುವ ದೇವರಿಗೆ ಚಿತ್ತವಿದ್ದರೆ ಆತನು ಧಗಧಗನೆ ಉರಿಯುವ ಬೆಂಕಿಯೊಳಗಿಂದ ನಮ್ಮನ್ನು ಬಿಡಿಸಬಲ್ಲನು; ಹೇಗೂ ನಿನ್ನ ಕೈಯಿಂದ ನಮ್ಮನ್ನು ಬಿಡಿಸುವನು.
¶ ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.
‹ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.›
¶ ‹“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,›
‹ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.›
‹ಆದುದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನೀವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ.›
ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.