¶ ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
TSK
TSK · ದಾನಿಯೇಲನು 3:28
مراجع Treasury of Scripture Knowledge في ಕನ್ನಡ IRV.
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು, ಅದನ್ನು ಶೂಲವನ್ನಾಗಿ ಮಾಡಿ, ಅದರ ಮೇಲೆ ಅವನನ್ನು ಏರಿಸಬೇಕು ಮತ್ತು ಅ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕೆಂದು ಆಜ್ಞಾಪಿಸಿದ್ದೇನೆ.
ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.
ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.
ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
¶ “ಈಗಲಾದರೂ ನೀವು ಸಿದ್ಧವಾಗಿದ್ದು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು?” ಎಂದು ಹೇಳಿದನು.
¶ ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.
¶ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
ಯೇಸು ಅವನಿಗೆ, ‹“ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’›‹ಎಂಬುದಾಗಿ ಬರೆದಿದೆಯಲ್ಲಾ”› ಎಂದು ಹೇಳಿದನು.
ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,
¶ ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
ಸಾಯುವುದು ನಿಶ್ಚಯವೆಂದೆನಿಸಿದಾಗ ನಾವು ನಮ್ಮ ಮೇಲೆ ಭರವಸವನ್ನಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.