TSK

TSK · ದಾನಿಯೇಲನು 4:14

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.

¶ “ಜನಾಂಗಗಳಲ್ಲಿ ಭಯಂಕರವಾದ ಅನ್ಯರು ಅದನ್ನು ಕಡಿದುಹಾಕಿ ಬಿಟ್ಟಿದ್ದಾರೆ. ಅದರ ರೆಂಬೆಗಳು ಗುಡ್ಡಗಳಲ್ಲಿಯೂ, ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ಹಳ್ಳಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಟ್ಟಿದೆ.

ಆಗ ಸಾರುವವನು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ, ಕುಲ, ಭಾಷೆಗಳವರೇ, ನಿಮಗೆ ರಾಜಾಜ್ಞೆಯಾಗಿದೆ.

¶ “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.

¶ “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.

ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು” ಎಂದು ಹೇಳಿದನು.

ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.