TSK

TSK · ದಾನಿಯೇಲನು 4:37

مراجع Treasury of Scripture Knowledge في ಕನ್ನಡ IRV.

العودة إلى المقطع

ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.

ನಮಗೆ ಶರಣನಾದ ದೇವರು ಮಾಡುವ ಕಾರ್ಯದಲ್ಲಿ ಯಾವ ಕುಂದೂ ಇಲ್ಲ; ಆತನು ನಡೆಸುವುದೆಲ್ಲಾ ನ್ಯಾಯ; ಆತನು ನಿರ್ವಂಚಕನಾದ ನಂಬಿಗಸ್ತ ದೇವರು, ನೀತಿಯುಳ್ಳವನೂ ಮತ್ತು ಯಥಾರ್ಥನೂ ಆಗಿದ್ದಾನೆ.

ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ವಸ್ತ್ರಗಳನ್ನೂ ಮತ್ತು ಕುದುರೆಯನ್ನೂ ಬೇಗನೆ ತೆಗೆದುಕೊಂಡು ಬಂದು ಅರಮನೆಯ ಬಾಗಿಲಿನಲ್ಲಿ ಕುಳಿತುಕೊಂಡಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು; ನೀನು ಹೇಳಿದವುಗಳಲ್ಲಿ ಒಂದನ್ನೂ ನೆರವೇರಿಸದೆ ಬಿಡಬೇಡ” ಎಂದು ಅಪ್ಪಣೆಮಾಡಿದನು.

ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.

ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.

ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.

ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.

ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.