TSK

TSK · ದಾನಿಯೇಲನು 5:28

مراجع Treasury of Scripture Knowledge في ಕನ್ನಡ IRV.

العودة إلى المقطع

ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.

ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.

ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.

ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.

¶ “ನಿನ್ನ ಕಾಲವಾದ ಮೇಲೆ ನಿನಗಿಂತ ಬಿಳುಪಾದ (ಬೆಳ್ಳಿ) ಮತ್ತೊಂದು ರಾಜ್ಯವು ಉಂಟಾಗುವುದು. ಅನಂತರ ಬೇರೊಂದು ಮೂರನೆಯ ರಾಜ್ಯವು ತಾಮ್ರದ್ದಾಗಿ ತಲೆದೋರಿ ಭೂಮಂಡಲವನ್ನೆಲ್ಲಾ ಆಳುವುದು.

¶ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.

ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯ ಮತ್ತು ಪಾರಸಿಯ ರಾಜರು.