TSK

TSK · ದಾನಿಯೇಲನು 6:1

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.

ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.

¶ ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,

ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.