TSK

TSK · ದಾನಿಯೇಲನು 6:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.

ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.

ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.

¶ ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.

‹ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.›