ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.
TSK
TSK · ದಾನಿಯೇಲನು 8:16
مراجع Treasury of Scripture Knowledge في ಕನ್ನಡ IRV.
ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.
ಆದರೂ ಸತ್ಯಶಾಸನದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುವೆನು. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಪಾಲಕನಾದ ಮೀಕಾಯೇಲನ ಹೊರತು ನನಗೆ ಬೆಂಬಲರಾಗತಕ್ಕವರು ಇನ್ನಾರೂ ಇಲ್ಲ ಎಂದನು.”
ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
¶ ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.
ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ, ಯಾರನ್ನೂ ಕಾಣದೆ ಮೂಕರಂತೆ ವಿಸ್ಮಿತರಾಗಿ ನಿಂತರು.
¶ ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?
¶ ‹“ಯೇಸುವೆಂಬ ನಾನು›‹ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ›‹ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು›‹ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ›‹ಅವನ ಸಂತತಿಯೂ›‹ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”›