ಪರಾತ್ಪರನಾದ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಂಡು ಪರಾತ್ಪರನಾದ ದೇವರ ಭಕ್ತರನ್ನು ಬಾಧಿಸಿ ಕಟ್ಟಳೆಯ ಕಾಲಗಳನ್ನೂ, ಧರ್ಮವಿಧಿಗಳನ್ನೂ ಮಾರ್ಪಡಿಸಲು ಮನಸ್ಸು ಮಾಡುವನು; ಆ ಭಕ್ತರು ಒಂದುಕಾಲ, ಎರಡುಕಾಲ, ಅರ್ಧಕಾಲ ಅವನ ಕೈವಶವಾಗಿರುವರು.
TSK
TSK · ದಾನಿಯೇಲನು 8:24
مراجع Treasury of Scripture Knowledge في ಕನ್ನಡ IRV.
ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯಹೋಮವನ್ನು ನೀಗಿಸಿ, ಹಾಳುಮಾಡುವ ಅಸಹ್ಯವಸ್ತುವನ್ನು ಪ್ರತಿಷ್ಠಿಸುವುದು.
ನದಿಯ ನೀರಿನ ಮೇಲೆ ನಾರಿನ ಹೊದಿಕೆಯನ್ನು ಹೊದ್ದುಕೊಂಡು ನಿಂತಿದ್ದ ಪುರುಷನನ್ನು ಕೇಳಲು, ಆ ಪುರುಷನು ಎಡ ಮತ್ತು ಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು. ದೇವಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.
¶ “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,