¶ ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿ ಇದ್ದಾಗ ಒಮ್ಮೆ ತನ್ನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವುದನ್ನು ಕಂಡನು. ಯೆಹೋಶುವನು ಅವನ ಸಮೀಪಕ್ಕೆ ಹೋಗಿ “ನೀನು ನಮ್ಮವನೋ ಅಥವಾ ಶತ್ರು ಪಕ್ಷದವನೋ?” ಎಂದು ಕೇಳಲು
TSK
TSK · ದಾನಿಯೇಲನು 8:3
مراجع Treasury of Scripture Knowledge في ಕನ್ನಡ IRV.
ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.
ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ, ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತಿಗೆ ಹಾಕು! ನಿಮ್ಮ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರೇಪಿಸಿದ್ದಾನೆ. ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತಿಕಾರವೇ; ಮೇದ್ಯರೇ, ಬಾಣಗಳನ್ನು ಮಸೆಯಿರಿ, ಗುರಾಣಿಗಳನ್ನು ಸನ್ನದ್ಧ ಮಾಡಿರಿ!
ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ತೆಗೆದುಕೊಂಡನು. ಅವನ ವಯಸ್ಸು ಹೆಚ್ಚು ಕಡಿಮೆ ಅರುವತ್ತೆರಡು.
ಆಹಾ, ಇನ್ನೊಂದು ಮೃಗ ಎರಡನೆಯದು; ಅದು ಕರಡಿಯ ಹಾಗಿತ್ತು, ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು; ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು ಎಂದು ಅದಕ್ಕೆ ಹೇಳೋಣವಾಯಿತು.
ಟೈಗ್ರಿಸ್ ಮಹಾನದಿಯ ದಡದ ಮೇಲೆ ಇದ್ದು ಕಣ್ಣೆತ್ತಿ ನೋಡಲು ಇಗೋ, ನಾರಿನ ಬಟ್ಟೆಯನ್ನು ಹೊದ್ದುಕೊಂಡು ಊಫಜಿನ ಅಪರಂಜಿಯ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡ ಒಬ್ಬ ಪುರುಷನು ನನಗೆ ಕಾಣಿಸಿದನು;
¶ ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
¶ ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು.
¶ ನಂತರ ನಾನು ಕಣ್ಣೆತ್ತಿ ನೋಡಲು, ಇಗೋ, ಎರಡು ಬೆಟ್ಟಗಳ ನಡುವೆಯಿಂದ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅ ಬೆಟ್ಟಗಳು ತಾಮ್ರದವುಗಳಾಗಿದ್ದವು.