TSK

TSK · ದಾನಿಯೇಲನು 9:16

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.

ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.

ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.

ನಿನ್ನ ನೀತಿಗನುಸಾರವಾಗಿ ನನ್ನನ್ನು ಬಿಡಿಸಿ ಪಾರುಮಾಡು; ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಉದ್ಧರಿಸು.

ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.

ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.

ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.

ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.

ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿ ಮಾಡುವೆನು.

¶ ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.

ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.

‹ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.›

ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.