ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
TSK
TSK · ದಾನಿಯೇಲನು 9:2
مراجع Treasury of Scripture Knowledge في ಕನ್ನಡ IRV.
ಬಹುಕಾಲದಿಂದ ಹಾಳುಬಿದ್ದಿರುವ ಈ ಸ್ಥಾನದ ಕಡೆಗೆ ನೀನು ಹೆಜ್ಜೆ ಹಾಕು. ನೋಡು, ವೈರಿಯು ಪವಿತ್ರಾಲಯದಲ್ಲಿ ಎಲ್ಲವನ್ನು ಕೆಡವಿಬಿಟ್ಟಿದ್ದಾನೆ.
ನಿನ್ನ ಕಟ್ಟಳೆಗಳು ನನ್ನ ಪರಮಾನಂದ, ಅವೇ ನನ್ನ ಮಾರ್ಗದರ್ಶನ.
¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
ಈ ದೇಶವೆಲ್ಲಾ ಹಾಳಾಗಿ ಬೆರಗಿಗೆ ಈಡಾಗುವುದು; ಮತ್ತು ಈ ಜನಾಂಗಗಳು ಎಪ್ಪತ್ತು ವರ್ಷ ಬಾಬೆಲಿನ ಅರಸನ ಅಡಿಯಾಳಾಗಿ ಬಿದ್ದಿರುವವು.
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.
ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.
¶ ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ಇಗೋ, ಮನುಷ್ಯ ಸದೃಶನೊಬ್ಬನು ನನ್ನೆದುರಿಗೆ ನಿಂತಿದ್ದನು.
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
¶ ‹“ಇದಲ್ಲದೆ›‹ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ› (ಇದನ್ನು ಓದುವವನು ತಿಳಿದುಕೊಳ್ಳಲಿ). ‹ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.›
ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.
¶ ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.
ಈ ಪ್ರವಾದನಾ ವಾಕ್ಯಗಳನ್ನು ಓದುವವನೂ, ಕೇಳುವವರೂ ಮತ್ತು ಇದರಲ್ಲಿ ಬರೆದಿರುವುದನ್ನು ಕೈಕೊಂಡು ನಡೆಯುವವರೂ ಧನ್ಯರು. ಏಕೆಂದರೆ ಅವು ನೆರವೇರುವ ಕಾಲವು ಸಮೀಪವಾಗಿದೆ.