¶ ಆ ಮೇಲೆ ಆ ಅಹವಾ ನದಿಯ ಬಳಿಯಲ್ಲಿ ನಾವು ಉಪವಾಸದಿಂದಿದ್ದು, ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಬೇಡಿಕೊಳ್ಳಬೇಕೆಂದು ಉಪವಾಸವನ್ನು ಪ್ರಕಟಿಸಿದನು.
TSK
TSK · ದಾನಿಯೇಲನು 9:3
مراجع Treasury of Scripture Knowledge في ಕನ್ನಡ IRV.
ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.
¶ ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.
ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ಮತ್ತು ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ, ಉಪವಾಸ, ರೋದನೆ ಮತ್ತು ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕುಳಿತುಕೊಂಡರು.
ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.
ನಾನು ದುಃಖದಿಂದ ಅತ್ತು ಉಪವಾಸ ಮಾಡಿ ನನ್ನ ಆತ್ಮವನ್ನು ಕುಗ್ಗಿಸಿಕೊಂಡಿದ್ದೇನೆ, ಪರಿಹಾಸ್ಯಕ್ಕೆ ಕಾರಣವಾಯಿತು.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
ಆ ಕಾಲದಲ್ಲಿ ದಾನಿಯೇಲನಾದ ನಾನು ಮೂರು ವಾರ ಶೋಕಿಸುತ್ತಿದ್ದೆನು.
ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”
‹ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.›
¶ ಅದಕ್ಕೆ ಕೊರ್ನೇಲ್ಯನು; “ನಾನು ನಾಲ್ಕು ದಿನಗಳ ಹಿಂದೆ ಇದೇ ಹೊತ್ತಿನಲ್ಲಿ ಮೂರನೇ ಗಳಿಗೆಯ ದೇವರ ಪ್ರಾರ್ಥನೆಯನ್ನು ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು;
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.