¶ “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.
TSK
TSK · ಧರ್ಮೋಪದೇಶಕಾಂಡ 1:2
مراجع Treasury of Scripture Knowledge في ಕನ್ನಡ IRV.
ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.
ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದ ವರೆಗೂ ಬೆನ್ನಟ್ಟಿ ಸಂಹರಿಸಿದರು.
¶ ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.
¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.