¶ ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.
TSK
TSK · ಧರ್ಮೋಪದೇಶಕಾಂಡ 10:21
مراجع Treasury of Scripture Knowledge في ಕನ್ನಡ IRV.
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.
ನಾನು ಸ್ತುತಿಸುವ ದೇವರೇ, ಸುಮ್ಮನಿರಬೇಡ.
ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.
ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.
ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.