ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.
TSK
TSK · ಧರ್ಮೋಪದೇಶಕಾಂಡ 13:1
مراجع Treasury of Scripture Knowledge في ಕನ್ನಡ IRV.
ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.
ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.
¶ ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.
ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು, ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ. ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ.
¶ ‹“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.›
‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
¶ ‹“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.›
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.