ಆ ಮರಿಯು ಊನವಿಲ್ಲದ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ ಅಥವಾ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.
TSK
TSK · ಧರ್ಮೋಪದೇಶಕಾಂಡ 16:2
مراجع Treasury of Scripture Knowledge في ಕನ್ನಡ IRV.
ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.
ನಿಮ್ಮ ದೇವರಾದ ಯೆಹೋವನು ಆಯ್ದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು, ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ಆಳುಗಳೂ ಮತ್ತು ನಿಮ್ಮ ಊರಿನಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.
ಪ್ರತಿ ವರ್ಷದಲ್ಲಿ ನೀವೂ ಮತ್ತು ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳದಲ್ಲಿ ಆತನ ಸನ್ನಿಧಿಯಲ್ಲೇ ಕೊಯಿದು ತಿನ್ನಬೇಕು.
‹ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು”› ಎಂದು ಹೇಳಿದನು.
¶ ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
ಆಗ ಆತನು ಅವರಿಗೆ, ‹“ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ.›