TSK

TSK · ಧರ್ಮೋಪದೇಶಕಾಂಡ 18:2

مراجع Treasury of Scripture Knowledge في ಕನ್ನಡ IRV.

العودة إلى المقطع

ಇದಲ್ಲದೆ ಯೆಹೋವನು ಆರೋನನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲರ ದೇಶದಲ್ಲಿ ನಿನ್ನ ಸ್ವಂತಕ್ಕಾಗಿ ಯಾವ ಸ್ವತ್ತು ಇರಬಾರದು. ಅವರೊಂದಿಗೆ ನಿನಗೆ ಪಾಲು ಇರುವುದಿಲ್ಲ. ಇಸ್ರಾಯೇಲರ ಮಧ್ಯದಲ್ಲಿ ನಾನೇ ನಿನಗೆ ಪಾಲಾಗಿಯೂ ಮತ್ತು ಸ್ವತ್ತಾಗಿಯೂ ಇದ್ದೇನೆ.

ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.

ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?

ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.

¶ “ಅವರಿಗೆ ಇದು ಸ್ವಾಸ್ತ್ಯವಾಗುವುದು, ನಾನೇ ಅವರ ಸ್ವತ್ತು; ಇಸ್ರಾಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು; ನಾನೇ ಅವರಿಗೆ ಆಸ್ತಿ.

¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.