TSK

TSK · ಧರ್ಮೋಪದೇಶಕಾಂಡ 19:13

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.

ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.

¶ “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.

¶ ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು.

ಆಗ ಆ ರಕ್ತಾಪರಾಧವು ಕ್ಷಮಿಸಲ್ಪಡುವುದು. ಹೀಗೆ ಯೆಹೋವನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯದೋಷವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕುವಿರಿ.

¶ ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.

ಅದಕ್ಕೆ ಅರಸನು ಅವನಿಗೆ, “ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.