TSK

TSK · ಧರ್ಮೋಪದೇಶಕಾಂಡ 2:9

مراجع Treasury of Scripture Knowledge في ಕನ್ನಡ IRV.

العودة إلى المقطع

ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.

ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.

ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.

ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.

ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ಉಳಿದುಕೊಂಡರು.

ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ