TSK

TSK · ಧರ್ಮೋಪದೇಶಕಾಂಡ 21:22

مراجع Treasury of Scripture Knowledge في ಕನ್ನಡ IRV.

العودة إلى المقطع

ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.

ಸತ್ತವನ ಮೇಲೆ ಅವನಿಗೆ ಮೊದಲು ದ್ವೇಷವಿಲ್ಲದ್ದರಿಂದ ಮತ್ತು ಅವನನ್ನು ಸಾಯಿಸುವ ಉದ್ದೇಶವಿಲ್ಲದ ಕಾರಣ ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯಮಾಡಿದವನಿಗೆ ಮುಯ್ಯಿತೀರಿಸುವ ಹಂಗುಳ್ಳ ಸಮೀಪ ಬಂಧುವು ಇನ್ನು ಕೋಪದಿಂದ ಉರಿಯುತ್ತಿರುವಾಗಲೇ ಅವನನ್ನು ಹಿಂದಟ್ಟಿ ಹೋಗಬಹುದು ಮತ್ತು ಮಾರ್ಗ ದೂರವಾಗಿರುವ ಪಕ್ಷಕ್ಕೆ ಅವನನ್ನು ಹಿಡಿದು ಕೊಂದು ಹಾಕಿಬಿಡಬಹುದು.

ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.

ನೀನು ಹೀಗೆ ಮಾಡುವುದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು” ಎಂದು ಕೂಗಿ ಹೇಳಿದನು.

ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.

ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.

¶ ಅದು ಸಿದ್ಧತೆಯ ದಿನವಾದುದರಿಂದ ಯೆಹೂದ್ಯರು, ಸಬ್ಬತ್ ದಿನದಲ್ಲಿ ಮೃತದೇಹಗಳು ಶಿಲುಬೆಯ ಮೇಲೆ ಇರಬಾರದೆಂದು, ಪಿಲಾತನನ್ನು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಕೇಳಿಕೊಂಡರು, ಏಕೆಂದರೆ ಆ ಸಬ್ಬತ್ ದಿನವು ಬಹು ವಿಶೇಷವಾದದ್ದು.

ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.

“ಈ ಮನುಷ್ಯನು ಮರಣದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದದ್ದೇನೂ ಮಾಡಿದವನಲ್ಲ” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.