ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
TSK
TSK · ಧರ್ಮೋಪದೇಶಕಾಂಡ 21:5
مراجع Treasury of Scripture Knowledge في ಕನ್ನಡ IRV.
¶ ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.
ವ್ಯಾಜ್ಯವಾಡುವ ಆ ಇಬ್ಬರೂ ಯೆಹೋವನ ಸನ್ನಿಧಿಯಲ್ಲಿ ಯಾಜಕರ ಮುಂದೆಯೂ, ಆಗ ಇರುವ ನ್ಯಾಯಾಧಿಪತಿಗಳ ಮುಂದೆಯೂ ನಿಲ್ಲಬೇಕು.
ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.