TSK

TSK · ಧರ್ಮೋಪದೇಶಕಾಂಡ 23:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಕೆ ದಿನತುಂಬಿದಾಗ ಅವಳಿ ಮಕ್ಕಳನ್ನು ಹೆತ್ತಳು.

ಫರೋಹನು ಯೋಸೇಫನನ್ನು ಕರೆಯಿಸಿ, “ನೀನು ನಿನ್ನ ಅಣ್ಣತಮ್ಮಂದಿರಿಗೆ ತಿಳಿಸಬೇಕಾದ ನನ್ನ ಆಜ್ಞೆ ಏನೆಂದರೆ ‘ನಿಮ್ಮ ಕತ್ತೆಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ದೇಶಕ್ಕೆ ಹೋಗಿ,

ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.

¶ ಇಸ್ರಾಯೇಲರು ಐಗುಪ್ತ ದೇಶಕ್ಕೆ ಸೇರಿರುವ ಗೋಷೆನ್ ಸೀಮೆಯಲ್ಲಿ ವಾಸಮಾಡಿದರು. ಅದರಲ್ಲಿ ಅವರು ಆಸ್ತಿಯನ್ನು ಸಂಪಾದಿಸಿ ಬಹುಸಂತಾನವಾಗಿ ಬಹಳವಾಗಿ ಹೆಚ್ಚಿದರು.

¶ ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.

¶ ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.

ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಆಳುವವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು.

ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪ್ರವಾಸಿಯಾದನು.

¶ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?