TSK

TSK · ಧರ್ಮೋಪದೇಶಕಾಂಡ 24:2

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.

ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.

ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.

ಅದಕ್ಕೆ ಆತನು, ‹“ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;›