ಆಗ ಊರಿನಲ್ಲಿರುವ ಅನ್ಯದೇಶದವರೂ, ಅನಾಥರು, ವಿಧವೆಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆಹೋದ ಲೇವಿಯರೂ ಊಟಮಾಡಿ ಸಂತೋಷವಾಗಿರಲಿ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಮಾಡುವನು.
TSK
TSK · ಧರ್ಮೋಪದೇಶಕಾಂಡ 26:13
مراجع Treasury of Scripture Knowledge في ಕನ್ನಡ IRV.
¶ ದಶಮಾಂಶವನ್ನು ಕೊಡಬೇಕಾದ ಮೂರನೆಯ ವರ್ಷದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ನೀವು ಪ್ರತ್ಯೇಕಿಸಿದಾಗ, ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರೂ, ಪರದೇಶಿಗಳೂ, ಅನಾಥರು ಮತ್ತು ವಿಧವೆಯರೂ ಊಟಮಾಡಿ ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕಲ್ಲಾ.
ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.
ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.
ನಾನು ನಿನ್ನ ನಿಯಮಗಳನ್ನು ಎಂದಿಗೂ ಮರೆಯುವುದಿಲ್ಲ, ಅವುಗಳಿಂದಲೇ ನನ್ನನ್ನು ಬದುಕಿಸಿದ್ದಿ.
ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.
ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.
ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
ನನ್ನ ಮಾತುಗಳು ಸುಳ್ಳಲ್ಲವೆಂಬುದನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ, ತಂದೆಯೂ ಆಗಿರುವಾತನು ನಿರಂತರ ಸ್ತುತಿ ಹೊಂದತಕ್ಕ ದೇವರೇ ಬಲ್ಲನು.
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?