ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
TSK
TSK · ಧರ್ಮೋಪದೇಶಕಾಂಡ 28:13
مراجع Treasury of Scripture Knowledge في ಕನ್ನಡ IRV.
ವಿಮೋಚನಕಾಂಡ 15:26
TSK
ಇವುಗಳನ್ನು ಕೈಕೊಂಡು ಅನುಸರಿಸಿರಿ. ನೀವು ಅನುಸರಿಸಿ ನಡೆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ, ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ, “ಈ ದೊಡ್ಡ ಜನಾಂಗವು ಜ್ಞಾನವಿವೇಕವುಳ್ಳ ಜನಾಂಗ” ಎಂದು ಹೇಳುವರು.
ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.
¶ ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.