TSK

TSK · ಧರ್ಮೋಪದೇಶಕಾಂಡ 28:8

مراجع Treasury of Scripture Knowledge في ಕನ್ನಡ IRV.

العودة إلى المقطع

ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.

ನೀವು ಬಹುದಿನದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.

ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.

ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

ದೇವರೇ, ನೀನೇ ನನ್ನ ಅರಸನು; ಯಾಕೋಬನಿಗೆ ಜಯವನ್ನು ಆಜ್ಞಾಪಿಸಿದಾತನು.

ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.

ಕಣಜದಲ್ಲಿ ಕಾಳು ಇನ್ನು ಇದೆಯೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಒಲೀವ್ ಈ ಗಿಡಗಳು ಫಲಿಸಲಿಲ್ಲವಲ್ಲಾ. ಇದೇ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.”

‹ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?›

‹‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,›